Breaking News

ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ.:ಕುಲಪತಿ ಪ್ರೊ.ರಾಮಚಂದ್ರ ಗೌಡ

Spread the love

ಬೆಳಗಾವಿ: ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ನೀಡುತ್ತಿರುವ ಶಿಕ್ಷಣ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತಿಲ್ಲ ಎಂದು ಕುಲಪತಿ ಪ್ರೊ.ರಾಮಚಂದ್ರ ಗೌಡ ಅವರು ಕಳವಳ ವ್ಯಕ್ತ ಪಡಿಸಿದರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಹಾಗೂ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಕೊರೊನಾದಿಂದ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿ ಬಂದಿದೆ. ಒಂದೆರಡು ವರ್ಷಗಳಲ್ಲಿ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ.  ವಿದ್ಯಾರ್ಥಿಗಳು ಜಗತ್ತಿನ ಬದಲಾವಣೆಯೊಂದಿಗೆ ಹೆಜ್ಜೆ ಹಾಕಬೇಕು. ಆಗ ಅವರ ಬದುಕು ಸುಂದರವಾಗಲು ಸಾಧ್ಯ ಎಂದರು. 

ಕೊರೊನಾ ಮನುಷ್ಯನ ಬದುಕಿನ ರೀತಿಯನ್ನು ಬದಲಾಯಿಸಿದೆ. ವಿದ್ಯಾರ್ಥಿಗಳು ದೇಹ ಮನಸಿನ ಪಾವಿತ್ರಕ್ಕೆ ಗಮನ ಕೊಡಬೇಕು ಎಂದು ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯ  ಡಾ.ಆನಂದ ಹೊಸೂರ ಹೇಳಿದರು. ಪ್ರಾಚಾರ್ಯ ಅನಿಲ್ ರಾಮದುರ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಚಾರ್ಯ ಡಾ.ಎಂ. ಜಯಪ್ಪ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ  ಈ ಸಂದರ್ಭದಲ್ಲಿ ದೈಹಿಕ ನಿರ್ದೇಶಕ  ಜಗದೀಶ್ ಗಸ್ತಿ, ಡಾ. ಹನುಮಂತಪ್ಪ ಸಂಜೀವಣ್ಣನವರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪದ್ಮಶ್ರೀ ಬಾಳಿಕಾಯಿ ಸ್ವಾಗತಿಸಿದರು. ಸಂಗೀತಾ ಲಮಾಣಿ ನಿರೂಪಿಸಿದರು. 


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ