Breaking News
Home / ರಾಜಕೀಯ / ಪಿಎಸ್‌ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ ನೀಡಿದ ಆರೋಪ

ಪಿಎಸ್‌ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ ನೀಡಿದ ಆರೋಪ

Spread the love

ಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.

 

ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದಾರೆ. ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್‌ಬುಕ್‌ ಪೇಜ್ ಮೂಲಕ ಪಾಟೀಲ್ ತಾನು ಮಾತನಾಡಿರುವ ಆಡಿಯೋ ಸೋಮವಾರ ಅಪ್ಲೋಡ್ ಮಾಡಲಾಗಿದೆ.

“ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರೆಸದಿರಲು, ಅದರಿಂದ ಪಾರು ಮಾಡಲು ನನಗೆ 3 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ 76 ಲಕ್ಷ ರೂ. ಹಣವನ್ನು ಕೊಡುತ್ತೇನೆ ಎಂದು ಹೇಳಿ ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತನ ಮೂಲಕ ಅವರಿಗೆ ತಲುಪಿಸಿದ್ದೇನೆ. ನಾನು ಜಾಮೀನು ಪಡೆದು ಹೊರ ಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅಧೀನ ಸಿಬ್ಬಂದಿ‌ಯು ಮನೆಗೆ ಬಂದು ಉಳಿದ ಹಣ ನೀಡಿವಂತೆ ಕಿರುಕುಳ ನೀಡಿದ್ದಾರೆ’ ಎಂದು ಫೇಸ್‌ ಬುಕ್‌ ವಿಡಿಯೋ ಮೂಲಕ ಆರೋಪ ಮಾಡಿರುವುದು ಈಗ ಇಡೀ ಪ್ರಕರಣದ ಕುರಿತು ಅನುಮಾನ ಮತ್ತು ಸಿಐಡಿ ತನಿಖೆ ಕುರಿತು ಶಂಕೆ ಉಂಟು ಮಾಡಿದೆ.

ಆರೋಪ ನಿರಾಕರಣೆ: ಈ ಎಲ್ಲ ಆರೋಪಗಳನ್ನು ಸಿಐಡಿ ಡಿವೈ ಎಸ್ಪಿ ಶಂಕರಗೌಡ ಪಾಟೀಲ ಅವರು ಅಲ್ಲಗಳೆದು ನಿರಾಕರಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಂಕರಗೌಡ, ‘ಆರ್.ಡಿ. ಪಾಟೀಲನೊಂದಿಗೆ ನಾನು ಮಾತನಾಡಿರುವುದು ಎನ್ನಲಾದ ಘಟನೆ ನಡೆದಿದ್ದು ಕಳೆದ ಜುಲೈನಲ್ಲಿ. ಈ ಆರೋಪದ ಬಗ್ಗೆ ಎಸಿಬಿಯವರೂ ತನಿಖೆ ನಡೆಸಿ ಇದರಲ್ಲಿ ಏನೂ ಹುರುಳಿಲ್ಲ ಎಂದು ಕೈಬಿಟ್ಟಿದ್ದಾರೆ. ತನಿಖಾಧಿಕಾರಿಗಳ‌ ನೈತಿಕತೆಯನ್ನು ಕುಗ್ಗಿಸಲು ಆರ್.ಡಿ. ಪಾಟೀಲ ಹೂಡಿರುವ ತಂತ್ರ ಇದು. ನನಗೆ ಹಲವು ಬಾರಿ ತಮ್ಮ ಹಿಂಬಾಲಕರನ್ನು ಛೂಬಿಟ್ಟು ಹಲ್ಲೆ ಮಾಡಲೂ ಯತ್ನಿಸಿದ್ದ. ಇದೆಲ್ಲವನ್ನೂ ಎದುರಿಸಿ ಪ್ರಕರಣವನ್ನು ಒಂದು ಹಂತಕ್ಕೆ ತಂದಿರುವ ತೃಪ್ತಿ ನಮಗಿದೆ’ ಎಂದಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ