Home / ರಾಜಕೀಯ / ಇಂದು ಸಾರಿಗೆ ನೌಕರರ ಧರಣಿ; ಬಸ್‌ ಸೇವೆ ಅಬಾಧಿತ

ಇಂದು ಸಾರಿಗೆ ನೌಕರರ ಧರಣಿ; ಬಸ್‌ ಸೇವೆ ಅಬಾಧಿತ

Spread the love

ಬೆಂಗಳೂರು: ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಜ. 24(ಮಂಗಳವಾರ)ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ.

ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ.

ಜಿಲ್ಲಾ ಬಸ್‌ ಘಟಕಗಳ (ಡಿಪೋ) ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ವಿಭಾಗೀಯ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗಳು ನಡೆಯಲಿವೆ.

ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಸಹಿತ ನಾಲ್ಕೂ ನಿಗಮಗಳಲ್ಲಿ ಸಾಂಕೇತಿಕವಾಗಿ ಸೀಮಿತ ಸಂಖ್ಯೆಯಲ್ಲಿ ಸಿಬಂದಿ ಹೋರಾಟದಲ್ಲಿ ಭಾಗವಹಿಸುವ ಮೂಲಕ ತಮಗಾದ ಅನ್ಯಾಯವನ್ನು ಪ್ರತಿಭಟಿಸಲಿದ್ದಾರೆ ಎಂದು ಸ್ವತಃ ಸಾರಿಗೆ ನೌಕರರ ಸಂಘಟನೆಗಳು ಸ್ಪಷ್ಟಪಡಿಸಿವೆ.

ಪ್ರತಿಭಟನೆಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಕೂಡ ಸ್ಪಷ್ಟಪಡಿಸಿವೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ