Breaking News

ಬೆಳಗಾವಿ: 26, 27ರಂದು ಸಿರಿಧಾನ್ಯ-ಸಾವಯವ ಮೇಳ

Spread the love

ಬೆಳಗಾವಿ: 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ. 26 ಹಾಗೂ 27ರಂದು ಸಿರಿಧಾನ್ಯ ಮತ್ತು ಸಾವಯುವ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ನಿತೇಶ ಪಾಟೀಲ ತಿಳಿಸಿದರು.

 

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದ ಸರದಾರ ಹೈಸ್ಕೂಲ್‌ ಮೈದಾನದಲ್ಲಿ ಜ.26 ಹಾಗೂ 27 ರಂದು ಸಿರಿಧಾನ್ಯ ಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜ.26ರಂದು ಬೆಳಗ್ಗೆ 11 ಗಂಟೆಗೆ ಸಿರಿಧಾನ್ಯ ಹಾಗೂ ಸಾವಯವ ಮೇಳ ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ಆಶ್ರಯದಲ್ಲಿ ಮೇಳ ಆಯೋಜಿಸಲಾಗಿದೆ ಎಂದರು.

ಸಿರಿಧಾನ್ಯ ಹಾಗೂ ಸಾವಯವ ಮೇಳದ ಪ್ರಚಾರಸಾಮಗ್ರಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬಿಡುಗಡೆಗೊಳಿಸಿದರು. ಜಿಪಂ ಸಿಇಒ ದರ್ಶನ್‌ ಎಚ್‌ .ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಉಪ ಕೃಷಿ ನಿರ್ದೇಶಕ ಎಸ್‌.ಬಿ. ಕೊಂಗವಾಡ, ಹೂಗಾರ, ಚಿಕ್ಕೋಡಿಯ ಕೃಷಿ ಉಪ ನಿರ್ದೇಶಕ ಎಲ್‌ .ಐ. ರೂಢಗಿ ಸುದ್ದಿಗೋಷ್ಠಿಯಲ್ಲಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ