ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹುಟ್ಟಿದಾಗಲೇ ಕಾಂಗ್ರೆಸ್‌ನಲ್ಲಿರಲಿಲ್ಲ. ಜನತಾ ದಳದಲ್ಲಿದ್ದು ಎಲ್ಲ ಬಗೆಯ ಅಧಿಕಾರ ಅನುಭವಿಸಿ, ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್‌ಗೆ ಬಂದರು. ಇವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದೆ ಎಂದು ಆರೋಗ್ಯ ಸಚಿವ ಡಾ| ಕೆ.
ಸುಧಾಕರ್ ಹೇಳಿದರು.
ತಾಲೂಕಿನ ಅಜ್ಜವಾರದಲ್ಲಿ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್‌ನವರು ಪ್ರಜಾಧ್ವನಿ ಯಾತ್ರೆ ಹೆಸರಿನಲ್ಲಿ ನನ್ನ ವಿರುದ್ಧ ಪ್ರಚಾರ ಸಭೆ ಮಾಡಿದ್ದಾರೆ. ಆದರೆ ನಾನು ಮಾಡಿದ ಆರೋಪಗಳಿಗೆ ಒಂದೇ ಒಂದು ಉತ್ತರ ನೀಡಲು ಸಾಧ್ಯವಾಗಿಲ್ಲ. ಆದರ ಬದಲಿಗೆ ವೈಯಕ್ತಿಕ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯನವರು ಒಂದೊಂದೇ ಕ್ಷೇತ್ರ ಹುಡುಕಾಡುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿ, ಬಳಿಕ ಕೋಲಾರಕ್ಕೆ ಹೋಗಿದ್ದಾರೆ ಎಂದು ಅಣಕಿಸಿದರು.
Laxmi News 24×7