ಕಲಬುರಗಿ: ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್ ಶೋ ಮತ್ತು ಏರ್ ಸ್ಪೇಷ್ ಎಕ್ಸಿಬಿಷನ್ ಆಯೋಜಿಸಲಾಗುತ್ತಿದೆ.
ಸ್ಪೇಸ್ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. 1996ರಿಂದಲೂ ಕರ್ನಾಟಕ ಏರ್ ಶೋಗೆ ಆತಿಥ್ಯ ವಹಿಸುತ್ತಿರುವುದು ನಾಡಿಗೆ ಗೌರವದ ವಿಷಯವಾಗಿದೆ ಎಂದರು.
ಬಜೆಟ್‌ಗೆ ಸಿದ್ಧತೆಗಳು ನಡೆದಿದ್ದು, ಈಗಾಗಲೇ ಎರಡೂ¾ರು ಸಭೆಗಳನ್ನು ನಡೆಸಿ ಚರ್ಚಿಸಲಾಗಿದೆ. ಪ್ರಮುಖವಾಗಿ ಜನಪರ ಬಜೆಟ್ ಆಗಲಿದೆ. ಉತ್ತಮ ಘೋಷಣೆಗಳಿರಲಿವೆ. ಕಾಯ್ದು ನೋಡಿ ಎಂದರು. ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದೂ ತಿಳಿಸಿದರು.
Laxmi News 24×7