Breaking News

ಫೆ.13ರಿಂದ ಬೆಂಗಳೂರಲ್ಲಿ ಏರ್‌ ಶೋ: C.M.ಬೊಮ್ಮಾಯಿ

Spread the love

ಲಬುರಗಿ: ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್‌ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್‌ ಶೋ ಮತ್ತು ಏರ್‌ ಸ್ಪೇಷ್‌ ಎಕ್ಸಿಬಿಷನ್‌ ಆಯೋಜಿಸಲಾಗುತ್ತಿದೆ.

ಸ್ಪೇಸ್‌ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. 1996ರಿಂದಲೂ ಕರ್ನಾಟಕ ಏರ್‌ ಶೋಗೆ ಆತಿಥ್ಯ ವಹಿಸುತ್ತಿರುವುದು ನಾಡಿಗೆ ಗೌರವದ ವಿಷಯವಾಗಿದೆ ಎಂದರು.

ಬಜೆಟ್‌ಗೆ ಸಿದ್ಧತೆಗಳು ನಡೆದಿದ್ದು, ಈಗಾಗಲೇ ಎರಡೂ¾ರು ಸಭೆಗಳನ್ನು ನಡೆಸಿ ಚರ್ಚಿಸಲಾಗಿದೆ. ಪ್ರಮುಖವಾಗಿ ಜನಪರ ಬಜೆಟ್‌ ಆಗಲಿದೆ. ಉತ್ತಮ ಘೋಷಣೆಗಳಿರಲಿವೆ. ಕಾಯ್ದು ನೋಡಿ ಎಂದರು. ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದೂ ತಿಳಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ