Home / Uncategorized / ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ನನಸು:ಕಾರಜೋಳ

ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ನನಸು:ಕಾರಜೋಳ

Spread the love

ಬೆಳಗಾವಿ: ‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ವಾದಗಳು ಮುಗಿದಿವೆ. ಆಂಧ್ರದ ವಾದ ಮಾತ್ರ ಬಾಕಿ ಇದೆ. ಕೆಲವೇ ದಿನಗಳಲ್ಲಿ ಇದೂ ಬಗೆಹರಿಯಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ

ವ್ಯಕ್ತಪಡಿಸಿದರು.

‘ಎರಡನೇ ನ್ಯಾಯಾಧೀಕರಣವು 2013ರಲ್ಲಿ ನಮಗೆ 130 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅನುಮತಿ ನೀಡಿತ್ತು. ಆದರೆ, ಬಳಸಿಕೊಳ್ಳಲು ಆಗಿಲ್ಲ. ಸದ್ಯ ನಾಲ್ಕೂ ರಾಜ್ಯಗಳಿಂದ ಸುಪ್ರೀಂಕೋರ್ಟ್‌ನಲ್ಲಿ ದಾವೆಗಳಿವೆ. ಮೇಲಾಗಿ, ಯೋಜನೆ ಅನುಷ್ಠಾನಕ್ಕಾಗಿ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಬೇಕು ಎಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳಿಂದ ಜಂಟಿಯಾಗಿ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಎರಡೂ ರಾಜ್ಯಗಳ ವಾದ ಒಂದೇ ಆಗಿದ್ದರಿಂದ ಶೀಘ್ರ ನೀರು ಬಳಕೆ ಸಾಧ್ಯವಾಗಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯದಲ್ಲಿ ಒಟ್ಟಾರೆ 66.66 ಲಕ್ಷ ಹೆಕ್ಟೇರ್‌ ನೀರಾವರಿಗೆ ಅವಕಾಶವಿದ್ದು, ಬೃಹತ್‌ ನೀರಾವರಿ ಯೋಜನೆಗೆ 40 ಲಕ್ಷ ಹೆಕ್ಟೇರ್‌ ಒಳಪಡುತ್ತದೆ. ಈಗಾಗಲೇ 30 ಲಕ್ಷ ಹೆಕ್ಟೇರ್‌ ಪೂರ್ಣಗೊಂಡಿದೆ. ಇನ್ನೂ 10 ಲಕ್ಷ ಹೆಕ್ಟೇರ್‌ ಬಾಕಿಯಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಕಾರ್ಯಗತವಾದರೆ 5.91 ಲಕ್ಷ ಹೆಕ್ಟೇರ್‌ ನೀರಾವರಿ ಆಗಲಿದೆ ‘ ಎಂದರು.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ