Home / ರಾಜಕೀಯ / ವಸತಿ ಯೋಜನೆಗೆ ನೀಡಿದ್ದ ₹ 300 ಕೋಟಿ ವಾಪಸ್

ವಸತಿ ಯೋಜನೆಗೆ ನೀಡಿದ್ದ ₹ 300 ಕೋಟಿ ವಾಪಸ್

Spread the love

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದಲ್ಲಿನ (ಎಸ್‌ಟಿ) ಅಲೆಮಾರಿ ಸಮುದಾಯಗಳ ಜನರ ವಸತಿ ಯೋಜನೆಗೆ ಮೀಸಲಿಟ್ಟಿದ್ದ ₹ 300 ಕೋಟಿ ಅನುದಾನವನ್ನು ಇತರ ವಸತಿ ಯೋಜನೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೇ ಯೋಜನೆಯಡಿ 2021- 22ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹ 250 ಕೋಟಿಯನ್ನು ಈ ಹಿಂದೆಯೂ ಸರ್ಕಾರ ವಾಪಸ್ ಪಡೆದಿತ್ತು.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಆದ್ಯತೆ ಮೇರೆಗೆ ಮನೆ ನಿರ್ಮಿಸಿ ಕೊಡುವುದಾಗಿ 2022-23ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಬಜೆಟ್‌ ಘೋಷಣೆಯಂತೆ ₹ 300 ಕೋಟಿ ಅನುದಾನ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ 2022 ಏಪ್ರಿಲ್‌ 18ರಂದು ಆದೇಶ ಹೊರಡಿಸಿತ್ತು.

ರಾಜೀವ್ ಗಾಂಧಿ ವಸತಿ ಯೋಜನೆಯಡಿ ₹ 2 ಲಕ್ಷ ಘಟಕ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರ ಜತೆಗೆ ಹೆಚ್ಚುವರಿಯಾಗಿ ₹ 2 ಲಕ್ಷ ನೀಡಿ ಒಟ್ಟು ₹ 4 ಲಕ್ಷ ಘಟಕ ವೆಚ್ಚದಲ್ಲಿ ಮನೆ ನಿರ್ಮಿಸಲು ₹ 300 ಕೋಟಿ ಮೀಸಲಿಡಲಾಗಿತ್ತು. ಈ ಸಂಬಂಧ ಮನೆ ಮಂಜೂರಾತಿ ಮತ್ತು ಆದೇಶ ಪತ್ರಗಳನ್ನೂ ಶಿವಮೊಗ್ಗದಲ್ಲಿ ಸೆ. 3ರಂದು ಸಾಂಕೇತಿಕವಾಗಿ ಸರ್ಕಾರ ವಿತರಣೆ ಮಾಡಿತ್ತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ