Breaking News

ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ

Spread the love

ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ ನಡೆಯಲಿ. ಇದಕ್ಕೆ ಯಾಕೆ 200 ಮಂದಿ ಭಾಗಿಯಾಗಬೇಕು. ಕೊರೊನಾ ಹೆಚ್ಚಾದರೆ ಹೊಣೆ ಯಾರು ಎಂದು ದಸರಾಗೆ ಜನ ಸೇರುವುದಕ್ಕೆ ಎಸ್.ಎಲ್.ಭೈರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಜಂಬೂ ಸವಾರಿ ನಡೆಸೋದು ಮಾವುತರು, ಇದಕ್ಕೆ ಜನ ಬೇಕಾಗಿಲ್ಲ. ಕೆಲವರು ದಸರಾದಿಂದ ಬ್ಯುಸಿನೆಸ್ ಅಂತಾರೆ. ಜನರನ್ನ ಒಟ್ಟಾಗಿ ಸೇರಿಸಿದರೆ ಕೊರೊನಾ ಹರಡುವುದಿಲ್ಲವೆ? ಬ್ಯುಸಿನೆಸ್ ಎಲ್ಲ ಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಮಹಿಳೆಗೆ ನರಕಯಾತನೆ : 12 ವರ್ಷ ಬಳಿಕ ವೈದ್ಯನ ಕರಾಳ ಮುಖ ಬಯಲು ಮಾಡಿದ ಪತ್ನಿ

Spread the loveಮೈಸೂರು: ಪ್ರೀತಿಯ ನಾಟಕವಾಡಿ, ಆತ್ಮತ್ಯೆಯ ಬೆದರಿಕೆ ಹಾಕಿ, ಅಮಾಯಕ ಹೆಣ್ಮಕ್ಕಳ ಬದುಕನ್ನು ನರಕವಾಗಿಸ್ತಿದ್ದ ಕಾಮುಕ ವೈದ್ಯನ ಕರಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ