ಬೆಂಗಳೂರು : ರಾಜ್ಯದ ಪ್ರತೀ ಸರಕಾರಿ ಕಾಲೇಜಿನಲ್ಲೂ ಸಂಗೊಳ್ಳಿ ರಾಯಣ್ಣ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪನೆಗೆ ಆದೇಶಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 192ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಡಿದರು ಎಂಬುದು ನಮ್ಮ ಮಕ್ಕಳಿಗೆ ತಿಳಿಯಬೇಕು.
ಅದಕ್ಕಾಗಿ ಈ ವೀರರ ಪ್ರತಿಮೆಗಳನ್ನು ಸ್ಥಾಪಿಸಲು ಸೂಚಿಸುವುದಾಗಿ ಹೇಳಿದರು.
Laxmi News 24×7