ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಬಿಜೆಪಿಗೆ ಸಮಾನ ಶತ್ರುಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ ಹೇಳಿದರು. ಈ ಮೂಲಕ ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸಮಾನ ಶತ್ರುಗಳು. ಚುನಾವಣೆ ವಿಚಾರದಲ್ಲಿ ಬಿಜೆಪಿ ಯಾರೊಂದಿಗೂ, ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಯಾರ ಜೊತೆಯೂ ಒಳ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರ ಹಿಡಿಯುವುದೇ ಬಿಜೆಪಿಯ ಗುರಿ. ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದರು.