Breaking News
Home / ರಾಜಕೀಯ / ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್

Spread the love

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.

ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.

ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ನಂತರ ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ ಎಂದು ಮೊಹಮ್ಮದ್ ಕಬೀರ್ ಎನ್ನುವವರು ದೂರು ನೀಡಿದ್ದರು. ಈ ದೂರಿಗೆ ಪೊಲೀಸ್ ಆಯಕ್ತರು ಸ್ಪಂದಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇದೀಗ ಲೋಕಾಯುಕ್ತ, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದು, ದೂರುದಾರು ಮಾಡಿರುವ ಆರೋಪಗಳಿಗೆ ಫೆ.14ರೊಳಗೆ ಸೂಕ್ತ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.


Spread the love

About Laxminews 24x7

Check Also

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ