Breaking News

‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನ

Spread the love

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನರಾಗಿದ್ದಾರೆ.

ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಅಶೋಕ ಚಂದರಗಿ ಪಡೆದಿದ್ದಾರೆ.

ಕಳೆದ ಬಾರಿ ಇದೇ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿತ್ತು.

ಎಂಇಎಸ್‌ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ ಇಟ್ಟವರಲ್ಲಿ ಅಶೋಕ ಚಂದರಗಿ ಕೂಡ ಒಬ್ಬರು. ಕನ್ನಡ ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ, ಚಳವಳಿ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದಾರೆ. ಕರ್ನಾಟಕ ಗಡಿ ರಕ್ಷಣೆ ಹೋರಾಟ, ಕಳಸಾ- ಬಂಡೂರಿ ನಾಲಾ ಯೋಜನೆಗಾಗಿ ಮಾಡಿದ ಚಳವಳಿ ಸೇರಿದಂತೆ ನಾಲ್ಕು ದಶಕಗಳಿಂದ ಅವರ ಹೋರಾಟದ ಬದುಕನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಫೆ.2ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು.


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ