Home / ರಾಜಕೀಯ / ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ

ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ

Spread the love

ವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

 

ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ.

ಭದ್ರತಾ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಮುಂದಿನ ಎರಡು ದಿನಗಳಲ್ಲಿ ಹಾಗೂ ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶಕ್ಕೆ ಭಾರಿ ಜನಸಂದಣಿಯನ್ನು ನಿರೀಕ್ಷಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಖರ್ಗೆ ಉಲ್ಲೇಖ ಮಾಡಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ