Breaking News

ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ರಮೇಶ ಜಾರಕಿಹೊಳಿ ಒತ್ತಾಯ

Spread the love

ಬೆಳಗಾವಿ: ಸಿಡಿ ವಿಚಾರದಲ್ಲಿ ಷಡ್ಯಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆಶ್ರಯದಲ್ಲಿಯೇ ಆ ಯುವತಿ ಬೆಂಗಳೂರಿನಲ್ಲಿ ನೆಲೆಸಿದ್ದು, ಡಿಕೆಶಿ, ಯುವತಿ ಸೇರಿದಂತೆ ಸಿಡಿ ಗ್ಯಾಂಗ್ ಬಂಧಿಸುವಂತೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದರು.

 

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂರಾರು ಜನರ ಸಿಡಿ ಇಟ್ಟುಕೊಂಡು ಷಡ್ಯಂತ್ರ ರೂಪಿಸಿರುವ ಮಹಾನಾಯಕ ಡಿ.ಕೆ.‌ಶಿವಕುಮಾರ ಅವರನ್ನು ಕೂಡಲೇ ಬಂಧಿಸಬೇಕು. ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರು.

ಸುಮಾರು ಒಂದು ವರ್ಷದಿಂದ ಸುಮ್ಮನೆ ಕುಳಿತಿದ್ದೆ.‌ ಮಿಸ್ಟರ್ ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಬ್ಬ ವ್ಯಕ್ತಿ ಜೀವನ ಹಾಳು ಮಾಡಿ ರಾಜಕೀಯ ಮಾಡುವ ಡಿಕೆ ಶಿವಕುಮಾರ್ ರಾಜಕೀಯ ಮಾಡಲು ಅಯೋಗ್ಯ ವ್ಯಕ್ತಿ. ನಾನು ವೈಯಕ್ತಿಕ ಯಾರನ್ನು ದ್ವೇಷ ಮಾಡುವುದಿಲ್ಲ. ನಾನು ಯಾವುದೇ ಸಿಡಿ ರಿಲೀಜ್ ಮಾಡಲ್ಲ. ಜಾರಕಿಹೊಳಿ ಯಾವುದೇ ಗಾಳಿಯಲ್ಲಿ ಗುಂಡು ಹಾರಿಸಲ್ಲ. ಡಿಕೆ ಶಿವಕುಮಾರ್ ಒಬ್ಬ ಮಹಿಳೆ ಮುಖಾಂತರ ನನ್ನ ಜೀವನ ಹಾಳು ಮಾಡಿದ್ದಾರೆ.

ಶಿವಕುಮಾರ್ ಅವರ ಆಡಿಯೋ ಝಲಕ್ ತೋರಿಸುತ್ತೇನೆ. ಸಿಡಿ ರಿಲೀಜ್ ಮಾಡುವುದಿಲ್ಲ. ಡಿ.ಕೆ.‌ ಶಿವಕುಮಾರ ಸಾವಿರಾರು ಕೋಟಿ ಮಾಲೀಕ. ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ