Breaking News
Home / ಜಿಲ್ಲೆ / ಕೊಪ್ಪಳ / ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : H.D.K.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : H.D.K.

Spread the love

ಕೊಪ್ಪಳ: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸಂಪೂರ್ಣ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡುವೆ ನಮಗೆ ಪೂರ್ಣ ಬಹುಮತ ಕೊಡಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.

ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

 

ಸಾವಿರಾರು ರೈತರು ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡು ನಮ್ಮ ಬಳಿ ಬರುತ್ತಿದ್ದಾರೆ. ಯುವಕರು ಕೆಲಸ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಜನರುವಮನೆ ಇಲ್ಲ ಎಂದು ನೋವು ಹೇಳಿಕೊಳ್ಳುತ್ತಿದ್ದಾರೆ. ಕೋವಿಡ್ ವೇಳೆ ಮೃತ ಕುಟುಂಬಕ್ಕೆ ಇನ್ನೂ ಪರಿಹಾರ ಬಂದಿಲ್ಲಾ ಎನ್ನುತ್ತಾರೆ. ಅವರ ಕಷ್ಟಕ್ಕೆ ನಾನು ಸ್ಪಂದನೆ ಮಾಡುತ್ತಿದ್ದೇನೆ

ಫಸಲ್ ಬಿಮಾ ಯೋಜನೆ ಹೆಸರಲ್ಲಿ ವಿಮಾ ಕಂಪನಿ ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದೆ. ಈ ಹಿಂದೆ ರೈತರ ಆತ್ಮಹತ್ಯೆ ಹೆಚ್ಚಾದವು. ಅವರ ನೋವು ಅರಿತು ರೈತರ ಸಾಲ ಮನ್ನಾ ಮಾಡುವೆ ಎಂದು ಹೇಳಿದ್ದೆ. ನನಗೆ ಪೂರ್ಣ ಬಹುಮತ ಬರಲಿಲ್ಲ. ಆದರೂ ರೈತರ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ನನಗೆ ಒತ್ತಡ ಹಾಕಿದ್ರು, ನಿಮ್ಮ ಕಾರ್ಯಕ್ರಮಕ್ಕೆ ಹಣ ಹೊಂದಿಸಿ ಕೊಡುವೆ ಎಂದಿದ್ದೆ. ಆದರೂ ಸರ್ಕಾರ ಕೆಡವಿದರು. ಆ ಮಧ್ಯೆ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ನಂತರ ಬಂದಿರುವ ಬಿಜೆಪಿ ಸರ್ಕಾರ ಇನ್ನೂ 2 ಲಕ್ಷ ಕುಟುಂಬಕ್ಕೆ ಸಾಲ ಮನ್ನಾ ಹಣ ಬಂದಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದರೆ ಸಾಲ ಮುಟ್ಟದ ರೈತರಿಗೆ ಸಾಲ ಮನ್ನಾ ಮಾಡುವೆ ಎಂದರು.


Spread the love

About Laxminews 24x7

Check Also

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ

Spread the loveಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ