Breaking News
Home / ಜಿಲ್ಲೆ / ಬೆಂಗಳೂರು / ಫೆಬ್ರವರಿ 6ರಂದು ಪ್ರಧಾನಿ ಮೋದಿ ತುಮಕೂರಿಗೆ

ಫೆಬ್ರವರಿ 6ರಂದು ಪ್ರಧಾನಿ ಮೋದಿ ತುಮಕೂರಿಗೆ

Spread the love

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಪ್ರಧಾನಿನರೇಂದ್ರ ಮೋದಿ ಅವರು ಕರ್ನಾಟಕಕ್ಕೆಆಗಮಿಸುತ್ತಲೇ (PM Narendra Modi Karnataka Visit) ಇದ್ದು, ಇದೀಗ ಫೆ.6ರಂದು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 10.55ಕ್ಕೆ ಬೆಂಗಳೂರಿಗೆ ಆಗಮಿಸುವ ಮೋದಿ, 11.30ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಇಂಡಿಯಾ ಎನರ್ಜಿ ಸಪ್ತಾಹವನ್ನು (India Energy Week) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 2.45ಕ್ಕೆ ಬಿಐಇಸಿಯಿಂದ ತುಮಕೂರಿನ ಗುಬ್ಬಿಗೆ (PM Narendra Modi Tumakuru Visit) ಹೆಲಿಕಾಫ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

ಗುಬ್ಬಿ ತಾಲೂಕಿನಲ್ಲಿ ಮಧ್ಯಾಹ್ನ 3.30ಕ್ಕೆ ಹೆಚ್​ಎಎಲ್ ಹೆಲಿಕಾಫ್ಟರ್ ಫ್ಯಾಕ್ಟರಿ ಲೋಕಾರ್ಪಣೆ ಮಾಡಲಿರುವ ಮೋದಿ, ನಂತರ ಜಲಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 4.45 ಕ್ಕೆ ಗುಬ್ಬಯಿಂದ ಹೆಲೆಕಾಫ್ಟರ್ ಮೂಲಕ ಮತ್ತೆ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಸಂಜೆ 5.20 ಕ್ಕೆ ದೆಹಲಿಗೆ ನಿರ್ಗಮಿಸಲಿದ್ದಾರೆ

ಇನ್ನು ಫೆಬ್ರವರಿ ತಿಂಗಳಲ್ಲಿ ಮತ್ತೆ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣವಾಗ್ತಿರುವ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಪ್ರಧಾನಿಯವರನ್ನು ಕಾಣಲು ಜಿಲ್ಲೆಯ ಲಕ್ಷಾಂತರ ಜನರು ಅಂದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಹಾಗಾಗಿ ಇದಕ್ಕೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಈ ಹಿಂದೆ ಹೇಳಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ