ಶಿವಮೊಗ್ಗ: ಬಿಜೆಪಿಯ ರಾಷ್ಟ್ರೀಯ ವರಿಷ್ಠರು ರಾಜ್ಯದ ಬಗ್ಗೆ ಹೆಚ್ಚಿನ ಗಮನ ನೀಡಿದ್ದು, ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಡಿಜಿಟಲ್ ವಾಲ್ ಪೇಂಟಿಂಗ್ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೋದಿಯವರಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದ ಮತದಾರರು ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು.
ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಬಿಜೆಪಿ ಸರಕಾರದ ಸಾಧನೆಯಿಂದ ರಾಷ್ಟ್ರೀಯ ವರಿಷ್ಠರ ಅಭಿಲಾಷೆಯಂತೆ ಈ ಬಾರಿ ನಾವು 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಸ್ಪಷ್ಟ ಬಹುಮತ ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Laxmi News 24×7