Breaking News

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

Spread the love

ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ‌ಸರ್ವೇಗಳು ಕೂಡ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಆಗ್ತಾ ಇವೆ.

ಇದರ ಬೆನ್ನಲ್ಲೇ ರಾಯಚೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಅಭ್ಯರ್ಥಿಯ ರಾಜಕೀಯ ಭವಿಷ್ಯ ನುಡಿದಿದ್ದಾನೆ ಓರ್ವ ವ್ಯಕ್ತಿ.

ಹೌದು, ನಾಗರ ಹಾವು ಹಿಡಿದು ಕುತ್ತಿಗೆಗೆ ಹಾಕೊಂಡು ಚುನಾವಣಾ ಭವಿಷ್ಯ ನುಡಿದ್ದಾನೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸಮುದ್ರ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಬಂದಿದ್ದ ನಾಗರಹಾವು ಹಿಡಿದುಕೊಂಡು ಹುಚ್ಚಾಟ ಮಾಡಿದ್ದಾನೆ. ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಗೆಲುವು ಸಾಧಿಸುತ್ತಾರೆ ಎಂದಿದ್ದಾನೆ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ