Breaking News

ಅನಿಲ್‌ ದೇಶ್‌ಮುಖ್‌ ಆಪ್ತ ಕುಂದನ್‌ ಶಿಂಧೆಗೆ ಜಾಮೀನು

Spread the love

ಮುಂಬೈ (‍ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರ ಆಪ್ತ ಕುಂದನ್‌ ಶಿಂಧೆಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಆದರೆ, ಶಿಂಧೆ ಅವರು ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯಾಗಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.

 

ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಶಿಂಧೆ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದರು. ಪ್ರಕರಣದ ಇತರ ಆರೋಪಿಗಳಲ್ಲಿ ಅನಿಲ್ ದೇಶಮುಖ್ ಮತ್ತು ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಸೇರಿದ್ದಾರೆ.

ಅನಿಲ್‌ ದೇಶ್‌ಮುಖ್‌ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದಾಗ, ಶಿಂಧೆ ಅವರ ಆಪ್ತ ಸಹಾಯಕರಾಗಿದ್ದರು. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು 2021ರ ಜೂನ್‌ನಲ್ಲಿ ಶಿಂಧೆ ಅವರನ್ನು ಬಂಧಿಸಿತ್ತು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ