Breaking News

ಕೇಂದ್ರ ಸರ್ಕಾರದ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ : ವಿನಯ ಜವಳಿ

Spread the love

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡನೆ ಮಾಡಿರುವ ಕೇಂದ್ರ ಬಜೆಟ್ ನಿಜಕ್ಕೂ ದೂರದೃಷ್ಟಿಯ ಬಜೆಟ್ ಆಗಿದೆ. ಕರ್ನಾಟಕಕ್ಕೆ ಭದ್ರಾ ಪ್ರೊಜೆಕ್ಟ್ ಮೂಲಕ ಬಹುದೊಡ್ಡ ಕೊಡುಗೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ವಿನಯ ಜವಳಿ ಹೇಳಿದರು.

ನಗರದಲ್ಲಿಂದು ಬಜೆಟ್ ವೀಕ್ಷಣೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಿರುವ ಬಜೆಟ್ ಅಲ್ಲ. ಇಂದು ಮಂಡನೆ ಮಾಡಿರುವ ಬಜೆಟ್ ಮುಂದಿನ ದಿನಗಳಲ್ಲಿ ಜನರ ಅಭಿವೃದ್ಧಿಗಾಗಿಯೇ ಮಾಡಿರುವ ಬಜೆಟ್ ಆಗಿದೆ ಎಂದರು.

ರೈಲ್ವೆ ಇಲಾಖೆಯ ಸರ್ವಾಂಗೀಣ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆಯನ್ನು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಮಾಡಿರುವುದು ನಿಜಕ್ಕೂ ಹೊಸ ದಾಖಲೆಗೆ ನಾಂದಿ ಹಾಡಲಿದೆ. ಅಲ್ಲದೇ ಶಿಕ್ಷಣ, ಕೃಷಿ, ಸ್ಟಾರ್ಟಫ್ ಸೇರಿದಂತೆ ಎಲ್ಲ ವಲಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ