Breaking News
Home / ರಾಜಕೀಯ / ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್: H.D.K

ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್: H.D.K

Spread the love

ರಿಹರ/ದಾವಣಗೆರೆ: ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ತುಟಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

 

ಹರಿಹರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಮಾಡುವ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಅವರು; ನಿಸ್ಸಂಶಯವಾಗಿ ಕೇಂದ್ರ ಬಜೆಟ್ ಮಂಡನೆ ಮೂಗಿಗೆ ತುಪ್ಪ ಸವರುವಂತಾಗಿದೆ ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಬಜೆಟ್ ಇದು ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿ ಆದಷ್ಟು ಶೀಘ್ರ ಕಾರ್ಯಗತ ಮಾಡಬೇಕು. ಆದರೆ, ಯಾವಾಗ ಮುಗಿಸುತ್ತಿರಿ ಎನ್ನುವ ಬಗ್ಗೆ ಡಬಲ್ ಎಂಜಿನ್ ಸರಕಾರಕ್ಕೆ ಖಾತರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಕುಟುಕಿದರು.

ಅವರು ಈಗ ಯಾವುದೇ ಅಭಿವೃದ್ಧಿ ಘೋಷಣೆ ಮಾಡಿದರೂ ರಾಜ್ಯದಲ್ಲಿ ಚುನಾವಣೆ ಬಳಿಕವೇ ಜಾರಿಗೆ ಆಗುವುದು. ಈ ಬಜೆಟ್ ಪ್ರಸ್ತಾವನೆಗಳನ್ನು ಜಾರಿ ಮಾಡುವ ವಿಷಯದಲ್ಲಿ ಮುಂದೆ ರಾಜ್ಯದಲ್ಲಿ ರಚನೆ ಆಗುವ ಸರಕಾರ ಪ್ಪಾತ್ರವೂ ಮುಖ್ಯವಾಗಿರುತ್ತದೆ. ನರೇಂದ್ರ ಮೋದಿ ಅವರ ಸರಕಾರ ಬಂದು ಎಂಟು ವರ್ಷ ಆಗಿದೆ. ಈ ಎಂಟು ವರ್ಷದಲ್ಲಿ ಘೋಷಣೆಯಾಗದ ಕಾರ್ಯಕ್ರಮಗಳನ್ನು ಇಂದು ಘೋಷಣೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.

ಬಜೆಟ್ ಘೋಷಣೆಗಳು ಕಾಗದದ ಪತ್ರಗಳ ಘೋಷಣೆಗಳಗಿಯೇ ಉಳಿದಿವೆ. ಕಳೆದ 25 ವರ್ಷಗಳಿಂದ ರೈಲ್ವೇ ಯೋಜನೆಗಳು ಇನ್ನೂ ನೆನೆಗುದಿಗೆ ಬಿದ್ದಿವೆ. ಎಷ್ಟು ಸಲ ಕೇಂದ್ರದ ಬಳಿ ಅರ್ಜಿ ಹಿಡಿದುಕೊಂಡು ಹೋಗುವುದು? ಡಬಲ್ ಎಂಜಿನ್ ಸರಕಾರ ಬಂದರೆ ಎಲ್ಲಾ ಮಾಡುತ್ತೇವೆ ಎಂದರು. ಮೂರು ವರ್ಷ ಆಯಿತು. ಇವರು ಏನೂ ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ