Breaking News

ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪ, ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು &ಸಿಬ್ಬಂದಿ ವಿಚಾರಣೆ : ಅಲೋಕ್‌ ಕುಮಾರ್

Spread the love

ಬೆಳಗಾವಿ: ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್‌ಕುಮಾರ್ ಟ್ವೀಟ್‌ ಮಾಡಿದ್ದಾರೆ.

 

‘ನಗರದ ಕೆಲವು ಶಾಲೆ- ಕಾಲೇಜು ಸುತ್ತ ಗಾಂಜಾ ಮಾರಾಟ ನಡೆಯುತ್ತಿದೆ. ಜ.28ರಂದು ರಾತ್ರಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಟಿಳಕವಾಡಿ ಠಾಣೆ ಪೊಲೀಸ್‌ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ’ ಎಂದು ಶ್ರೀರಾಮ ಸೇನೆ ಹಿಂದೂಸ್ತಾನ್ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್‌ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಇದಕ್ಕೆ ಸಂಬಂಧಿಸಿ ಟ್ವೀಟ್‌ ಮಾಡಿದ ಅಲೋಕ್‌ಕುಮಾರ್‌, ‘ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ಮಾಡುತ್ತೇವೆ. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರವಿದೆಯೇ ಎಂಬ ಬಗ್ಗೆ ವಿಚಾರಣೆ ಕೈಗೊಳ್ಳಲಾಗುತ್ತಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಲೋಕಸಭಾ ಕ್ಷೇತ್ರದ 28 ಶಾಲೆಗಳು ಕೇಂದ್ರದ ‘ಪಿಎಂ-ಶ್ರೀ’ ಯೋಜನೆಗೆ ಆಯ್ಕೆ – ಸಂಸದ ಈರಣ್ಣ ಕಡಾಡಿ

Spread the loveಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಪಿಎಂ-ಶ್ರೀ’ ಯೋಜನೆಯಡಿ ಬೆಳಗಾವಿ ಲೋಕಸಭಾ ಕ್ಷೇತ್ರದ 21 ಪ್ರಾಥಮಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ