Breaking News

ಅಮಿತ್‌ ಶಾ ಭೇಟಿಗಾಗಿ ದಿಲ್ಲಿಯಲ್ಲಿ ರಮೇಶ್‌ ಜಾರಕಿಹೊಳಿ; ಕುತೂಹಲ

Spread the love

ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಈಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ಅಮಿತ್‌ ಶಾ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ.

ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದ ರಮೇಶ ಜಾರಕಿಹೊಳಿ ಗುರುವಾರ ಮಧ್ಯಾಹ್ನ ದಿಢೀರ್‌ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಮಿತ್‌ ಶಾ ಭೇಟಿಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ರಮೇಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಜತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ಮಾತುಕತೆ ನಡೆಸಿದ್ದಾರೆ. ರಮೇಶ ಹಾಗೂ ಶಾ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ