Breaking News

ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ (ಫೆ.2) ರಾತ್ರಿಯೇ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ಅಮಿತ್ ಶಾ ಅವರ ದೆಹಲಿಯ ನಿವಾಸದಲ್ಲಿ ಗುರುವಾರ ರಾತ್ರಿ 10:30ರ ಸಮಾಲೋಚನೆ ನಡೆಸಿದ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ ಬಳಿ 100ಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು ಸಾಕ್ಷ್ಯ ಗಳು ನನ್ನ ಬಳಿ ಇವೆ.‌ ಈ ಸಿಡಿ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದರೆ ಸತ್ಯ ಬಯಲಾಗಲಿದೆ ಎಂದು ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಟ್ಟರು. ಭೇಟಿ ವೇಳೆ ಮತ್ತೊಬ್ಬ ಕೇಂದ್ರ ಸಚಿವರೂ ಈ ಸಂದರ್ಭದಲ್ಲಿ ಇದ್ದರು. ಅಮಿತ್ ಶಾ ಅವರನ್ನು ಭೇಟಿ ಆಗಿರುವ ಬಗ್ಗೆ ಸ್ವತಃ ರಮೇಶ ಜಾರಕಿಹೊಳಿ ಅವರೇ ‘ಉದಯವಾಣಿ’ಯೊಂದಿಗೆ ಮಾತನಾಡಿ ಖಚಿತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ರಮೇಶ ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಒಪ್ಪಿದ ಅಮಿತ್ ಶಾ, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಚರ್ಚಿಸುವುದಾಗಿ‌ ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ :

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ