ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಇ-ಚಲನ್ ಮೂಲಕ ವಿಧಿಸಿದ ದಂಡ ಪಾವತಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯಿತಿ ಕೊಟ್ಟಿದ್ದು, ಫೆ.11ರೊಳಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ಶೇ.50ರಷ್ಟು ರಿಯಾಯಿತಿ ಸಿಗಲಿದೆ.
ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.
ರಾಜ್ಯಾದ್ಯಾಂತ ಫೆಬ್ರವರಿ 11ರೊಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ “ಒಂದು ಬಾರಿಯ ಕ್ರಮವಾಗಿ’ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಫೆ.2ರಂದು ಆದೇಶ ಹೊರಡಿಸಿದೆ.