Breaking News

25 ದೇವಸ್ಥಾನಗಳಲ್ಲಿ ಮಾಸ್ಟರ್‌ಪ್ಲಾನ್ ಶೀಘ್ರ ಜಾರಿ: ಶಶಿಕಲಾ ಜೊಲ್ಲೆ

Spread the love

ಬೆಳಗಾವಿ: ‘ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ 25 ಎ-ಗ್ರೇಡ್‌ ದೇವಸ್ಥಾನಗಳಲ್ಲಿ ‘ಮಾಸ್ಟರ್‌ ಪ್ಲಾನ್‌’ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಬಜೆಟ್‌ ಅಧಿವೇಶನ ಮುಗಿದ ತಕ್ಷಣ ಇದನ್ನು ಕಾರ್ಯಗತ ಮಾಡಲಾಗುವುದು’ ಎಂದು ಮುಜರಾಯಿ,

ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

‘ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಹಲವೆಡೆ ದೇವಸ್ಥಾನಗಳ ಜಾಗ ಅತಿಕ್ರಮಣವಾಗಿದೆ. ಮುಜರಾಯಿ ಹಾಗೂ ವಕ್ಫ್‌ ಭೂಮಿ ಅತಿಕ್ರಮಣವನ್ನು ‘ಮಾಸ್ಟರ್‌ ಪ್ಲಾನ್‌’ ಮೂಲಕ ತೆರವು ಮಾಡಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡ ದೇವಸ್ಥಾನ ಅಭಿವೃದ್ಧಿಗೆ ಸ್ವತಃ ಮುಖ್ಯಮಂತ್ರಿ ಆಸ್ಥೆ ವಹಿಸಿದ್ದಾರೆ. ಈಗಾಗಲೇ ಒತ್ತುವರಿ ತೆರವು ಮುಂದುವರಿದಿದೆ. ಮಾಸ್ಟರ್‌ ಪ್ಲಾನ್‌ನಲ್ಲಿ ಈ ದೇವಸ್ಥಾನದ ಅಭಿವೃದ್ಧಿ ಕೂಡ ಸೇರಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕಾಶಿಯಾತ್ರೆ’ ಯೋಜನೆ ಫೆ.15ರಿಂದ: ‘ವಿಪರೀತ ಚಳಿ ಇದ್ದ ಕಾರಣ ‘ಕಾಶಿಯಾತ್ರೆ’ ಯೋಜನೆಯನ್ನು ಎರಡು ತಿಂಗಳಿಂದ ಸ್ಥಗಿತ ಮಾಡಲಾಗಿತ್ತು. ಫೆ.15ರಿಂದ ಮತ್ತೆ ಆರಂಭಿಸಲಾಗುವುದು’ ಎಂದು ತಿಳಿಸಿದರು.


Spread the love

About Laxminews 24x7

Check Also

ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ

Spread the loveತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ