ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.
ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆಸಿ ಎಂದು ಯಡಿಯೂರಪ್ಪಗೆ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.