ಹೈದರಬಾದ್: ಕರ್ತವ್ಯನಿರತ ಇಬ್ಬರು ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಬ್ಬರು ಸಹ ಗಸ್ತು ವಾಹನದ ಸಿಬ್ಬಂದಿ ಎಂದು ತಿಳಿದುಬಂದಿದೆ. ವಾಹನವನ್ನು ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಯ ಮುಂದಿನ ಸಣ್ಣದಾಗ ಗೋಡೆಯ ಮೇಲೆ ಕುಳಿತು ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಇಬ್ಬರು ಕೂಡ ಹೈದರಾಬಾದ್ನ ಪಂಜಗುಟ್ಟ ಠಾಣಾ ಪೊಲೀಸರು ಎಂದು ಹೇಳಲಾಗಿದೆ. ಪಂಜಗುಟ್ಟ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಕೆಲಸದ ನಡುವೆ ವಾಹನವನ್ನು ರಸ್ತೆ ಪಕ್ಕದಲ್ಲೇ ನಿಲ್ಲಿಸಿ, ನಿಯಮಗಳನ್ನು ಗಾಳಿಗೆ ತೂರಿ ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ.
ಪಾರ್ಟಿ ಮಾಡಿದ ಸ್ಥಳದಲ್ಲಿ ವಾಕಿಟಾಕಿ ಸಹ ಇದೆ. ನಾನ್ವೆಜ್ ಊಟದೊಂದಿಗೆ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಯಮಗಳನ್ನು ಪಾಲಿಸದಿರುವವರ ಮೇಲೆ ಹದ್ದಿನ ಕಣ್ಣಿಡಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರಿದ್ದು, ಬೇಲಿಯೇ ಎದ್ದು ಹೊಲ ಮೇಯ್ದದಂತಿದೆ.
Laxmi News 24×7