Home / ರಾಜಕೀಯ / ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ!

ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ!

Spread the love

ಹೈದರಬಾದ್​: ಕರ್ತವ್ಯನಿರತ ಇಬ್ಬರು ಪೊಲೀಸ್​ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಇಬ್ಬರು ಸಹ ಗಸ್ತು ವಾಹನದ ಸಿಬ್ಬಂದಿ ಎಂದು ತಿಳಿದುಬಂದಿದೆ. ವಾಹನವನ್ನು ಪಕ್ಕದಲ್ಲಿ ಪಾರ್ಕ್​ ಮಾಡಿ ಮನೆಯ ಮುಂದಿನ ಸಣ್ಣದಾಗ ಗೋಡೆಯ ಮೇಲೆ ಕುಳಿತು ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಇಬ್ಬರು ಕೂಡ ಹೈದರಾಬಾದ್​ನ ಪಂಜಗುಟ್ಟ ಠಾಣಾ ಪೊಲೀಸರು ಎಂದು ಹೇಳಲಾಗಿದೆ. ಪಂಜಗುಟ್ಟ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಕೆಲಸದ ನಡುವೆ ವಾಹನವನ್ನು ರಸ್ತೆ ಪಕ್ಕದಲ್ಲೇ ನಿಲ್ಲಿಸಿ, ನಿಯಮಗಳನ್ನು ಗಾಳಿಗೆ ತೂರಿ ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಪಾರ್ಟಿ ಮಾಡಿದ ಸ್ಥಳದಲ್ಲಿ ವಾಕಿಟಾಕಿ ಸಹ ಇದೆ. ನಾನ್​ವೆಜ್​ ಊಟದೊಂದಿಗೆ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನಿಯಮಗಳನ್ನು ಪಾಲಿಸದಿರುವವರ ಮೇಲೆ ಹದ್ದಿನ ಕಣ್ಣಿಡಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರಿದ್ದು, ಬೇಲಿಯೇ ಎದ್ದು ಹೊಲ ಮೇಯ್ದದಂತಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ