ಹೊಸದಿಲ್ಲಿ: ಚಿತ್ರನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರೆ ಸ್ಥಾನದಿಂದ ಕೈ ಬಿಡಲಾಗಿತ್ತು.
2014ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಹೊತ್ತಲ್ಲಿ ನಾನು ಕಾಂಗ್ರೆಸ್ಗೆ ಸೇರ್ಪಡೆಯಾದೆ. ನಾನು ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ. ಪಕ್ಷದೊಳಗೆ ಉನ್ನತ ಮಟ್ಟದಲ್ಲಿ ಕುಳಿತಿರುವ ಕೆಲವರು, ವಾಸ್ತವತೆ ಅಥವಾ ಸಾರ್ವಜನಿಕರೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರದ ಜನರು ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಖುಷ್ಬೂ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯಬೇಕು ಎಂದುಕೊಂಡಿದ್ದ ನನ್ನಂಥವರನ್ನ ತುಳಿಯಲಾಗುತ್ತಿದೆ. ಹೀಗಾಗಿ ನಾನು ಬಹಳ ದಿನಗಳ ಅಲೋಚನೆಯ ಬಳಿಕ ಪಕ್ಷಕ್ಕೆ ವಿದಾಯ ಹೇಳಲು ಬಯಸುತ್ತಿದ್ದೇನೆ. ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.