Breaking News
Home / ಜಿಲ್ಲೆ / ಬೆಳಗಾವಿ / ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ಭೀಕರ ಅಪಘಾತ; ರೋಗಿ ದುರ್ಮರಣ

ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ಭೀಕರ ಅಪಘಾತ; ರೋಗಿ ದುರ್ಮರಣ

Spread the love

ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ನಡುವೆ ಸಂಭವಿದ ಭೀಕರ ಅಪಘಾತದಲ್ಲಿ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ.

ಅಕ್ಬರಸಾಬ್ ನೇಸರಗಿ (28) ಮೃತ ದುರ್ದೈವಿ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಅಕ್ಬರ್ ಸಾಬ್ ನೇಸರಗಿಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಹಾಗೂ ಆಂಬುಲೆನ್ಸ್ ಡಿಕ್ಕಿಹೊಡೆದಿದ್ದು, ಅದಾಗಲೇ ಅಪಘಾತದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅಕ್ಬರಸಾಬ್ ಕೊನೆಯುಸಿರೆಳೆದಿದ್ದಾನೆ.

ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ