Breaking News

ವಾಣಿ ಜಯರಾಂ ಖ್ಯಾತ ಹಿನ್ನೆಲೆ ಗಾಯಕಿ ಅನುಮಾನಾಸ್ಪದ ಸಾವು

Spread the love

ಚೆನ್ನೈ: ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ. ವಾಣಿಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು.

ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ವಾಣಿ ಜಯರಾಂ ಇದೀಗ ಶವವಾಗಿ ಪತ್ತೆಯಾಗಿರುವುದು ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ.

2023ರ ಗಣರಾಜ್ಯೋತ್ಸವದ ದಿನದಂದು ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ