ಲಕ್ನೋ, ಅ.12- ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲೂ ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದು ವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಸಿದಂತೆ ಗೋಂಡಾ ಜಿಲ್ಲೆಯ ದೇವಸ್ಥಾನ ಅರ್ಚಕರೊಬ್ಬರ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿರುವುದನ್ನು ಉಲ್ಲೇಖಿಸಿ ಮಾಯಾವತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಟ್ವಿಟರ್‍ನಲ್ಲಿ ವಾಗ್ದಾಳಿ ನಡೆಸಿದ್ದಾರೆ
ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲಿ ಅರ್ಚಕರ ಮೇಲೆ ದಾಳಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಅದನ್ನು ಗಮನಿಸಿದರೆ ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ.
ಇನ್ನು ಮುಂದಾದರೂ ಆಡಳಿತ ನಡೆಸುತ್ತಿರುವವರು ಧಾರ್ಮಿಕ ಮುಖಂಡರ ಮೇಲೆ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ.