Breaking News

ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ

Spread the love

ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು.

ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ರೇಖಾ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಆರೋಪಿಯಿಂದ 1 ಲಕ್ಷದ 87 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ