Breaking News

ಪ್ರಹ್ಲಾದ್ ಜೋಶಿ ಮುಂದಿನ ಸಿಎಂ ‘ ಎಂಬ ಹೆಚ್ಡಿಕೆ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್

Spread the love

ವದೆಹಲಿ : ಯಾರಿಗೂ ಬರದ ನ್ಯೂಸ್ ಗಳು ಕುಮಾರಸ್ವಾಮಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಮುಂದಿನ ಸಿಎಂ ಪ್ರಹ್ಲಾದ್ ಜೋಶಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

 

ಕುಮಾರಣ್ಣನಿಗೆ ಇಂತಹ ಮಾಹಿತಿ ಎಲ್ಲಿಂದ ಬರುತ್ತೋ ಗೊತ್ತಿಲ್ಲ .ಹೆಚ್ಡಿಕೆ ಇಂತಹ ವಿಚಾರಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರದ ಪ್ರಸ್ತುತ ಕಾರ್ಯಕ್ರಮದ ಬಗ್ಗೆ ಮಾತನಾಡಲಿ ಎಂದರು.ಕುಮಾರಸ್ವಾಮಿ ಮೊದಲು ತಮ್ಮ ಪಕ್ಷದ ಬಗ್ಗೆ ನೋಡಿಕೊಳ್ಳಲಿ, ನಮ್ಮ ಪಕ್ಷದ ಉಸಾಬರಿ ಅವರಿಗೆ ಬೇಡ. ಆಗಾಗ ಕುಮಾರಸ್ವಾಮಿಗೆ ಕನಸುಗಳು ಬೀಳುತ್ತದೆ, ಯಾರಿಗೂ ಬರದ ನ್ಯೂಸ್ ಗಳು ಕುಮಾರಸ್ವಾಮಿಗೆ ಸಿಗುತ್ತದೆ ಎಂದು ಟಾಂಗ್ ನೀಡಿದರು.

ಹೆಚ್ಡಿಕೆಗೆ ಸಿಟಿ ರವಿ ಟಾಂಗ್
ಹೆಚ್.ಡಿ ಕುಮಾರಸ್ವಾಮಿ ಹತಾಶೆಯಿಂದ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಸಿ.ಟಿ ರವಿ ಹೇಳಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿ.ಟಿ ರವಿ ಸಿಎಂ ಅಭ್ಯರ್ಥಿ ಬಗ್ಗೆ ಸಂಸದ ಮಂಡಳಿ ನಿರ್ಧರಿಸುತ್ತದೆ, ಜೋಶಿ ಹೆಸರು ಹೇಳಿಕೊಂಡು ವೋಟ್ ಕೇಳಬಾರದು.ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಟಾಂಗ್ ನೀಡಿದರು. ದೇವೇಗೌಡರ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡಬಾರದು. ಜೆಡಿಎಸ್ ಪಕ್ಷವನ್ನು ಮೊದಲು ಅವರರು ಸರಿಮಾಡಿಕೊಳ್ಳಲಿ. ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಟಾಂಗ್ ನೀಡಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣರಲ್ಲ. ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡೋದಕ್ಕೆ ಹೊರಟಿದ್ದಾರೆ. ಅವರು ಮರಾಠಿ ಪೇಶ್ವೆ ಸಮುದಾಯಕ್ಕೆ ಸೇರಿದವರು. ಇವರೇ ಶೃಂಗೇರಿ ಮಠವನ್ನು ಒಡೆದವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ