Home / ಮೂಡಲಗಿ / ಬೆಳಗಾವಿ ಮೇಯರ್ ಚುನಾವಣೆ: ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ ಬೆಂಬಲಿತ ಸದಸ್ಯರು

ಬೆಳಗಾವಿ ಮೇಯರ್ ಚುನಾವಣೆ: ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ ಬೆಂಬಲಿತ ಸದಸ್ಯರು

Spread the love

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಸೋಮವಾರ ನಡೆದ ಮೇಯರ್‌, ಉಪಮೇಯರ್‌ ಚುನಾವಣೆಗೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಂಬಲಿತ ಮೂವರು ಸದಸ್ಯರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದರು.

ಎಂಇಎಸ್‌ ಮುಖಂಡರೂ ಆಗಿರುವ ವೈಶಾಲಿ ಭಾತಖಾಂಡೆ ಉಪಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಂದರು.

ಪಾಲಿಕೆ ಆವರಣ ಪ್ರವೇಶಿಸುತ್ತಿದ್ದಂತೆಯೇ ‘ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಖಾನಾಪುರ’ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು. ಅವರೊಂದಿಗೆ ಬಂದ ಇನ್ನಿಬ್ಬರು ಎಂಇಎಸ್‌ ಬೆಂಬಲಿತ ಸದಸ್ಯರೂ ಧ್ವನಿಗೂಡಿಸಿದರು.

ಕೇಸರಿ ಬಣ್ಣದ ‘ಕೊಲ್ಹಾಪುರಿ ಪೇಟಾ’ ಧರಿಸಿ ಬಂದ ಮೂವರೂ ಘೋಷಣೆ ಮೊಳಗಿಸುತ್ತಲೇ ಪಾಲಿಕೆ ಪ್ರವೇಶಿಸಿದರು.

ಬಿಗಿ ಭದ್ರತೆ: ಪಾಲಿಕೆ ಚುನಾವಣೆ ನಡೆದ ಒಂದೂವರೆ ವರ್ಷದ ಬಳಿಕ ಮೇಯರ್‌, ಉಪಮೇಯರ್‌ ಆಯ್ಕೆ ಚುನಾವಣೆ ನಡೆಯುತ್ತಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದರಿಂದ ಸದಸ್ಯರ ಬೆಂಬಲಿಗರು ಪಾಲಿಕೆ ಸುತ್ತ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದಾರೆ.
ಬಿಗಿ ಭದ್ರತೆ ಏರ್ಪಡಿಸಿರುವ ಪೊಲೀಸರು 200 ಮೀಟರ್‌ ವ್ಯಾಪ್ತಿಯಲ್ಲಿ 144 ಕಲಂ ಜಾರಿ ಮಾಡಿದ್ದಾರೆ. ನಾಲ್ಕಕ್ಕೂ ಹೆಚ್ಚು ಜನ ನಿಷೇಧಾಜ್ಞೆ ಇರುವ ಸ್ಥಳದಲ್ಲಿ ಸೇರದಂತೆ ಧ್ವನಿವರ್ಧಕ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ