Breaking News

ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆ?: ಪೇಜಾವರ ಶ್ರೀ

Spread the love

ದ್ದೂರು: ಬ್ರಾಹ್ಮಣರು ಯಾಕೆ ಮುಖ್ಯಮಂತ್ರಿಯಾಗಬಾರದು? ಅವರು ಭಾರತದ ಪ್ರಜೆಗಳಲ್ಲವೇ? ಸಂಖ್ಯಾ ಬಲ ಇಲ್ಲ. ಅಲ್ಪಸಂಖ್ಯಾಕರಾಗಿದ್ದಾರೆ. ಆದ್ದರಿಂದ ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

 

ಪಟ್ಟಣದ ಐತಿಹಾಸಿಕ ಶ್ರೀಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದಲೂ ಬ್ರಾಹ್ಮಣರ ವಿರುದ್ಧ ಹೇಳಿಕೆಗಳು ಕೇಳಿ ಬರುತ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಹೆಚ್ಚಾಗಿ ಕೇಳಿ ಬರುತ್ತಿದ್ದು, ಬ್ರಾಹ್ಮಣರು ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ ಎಂದು ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಹೇಳಿದರು.

ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ
ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಬಂದಿದ್ದಾರೆ? ಎಷ್ಟು ಮಂದಿಗೆ ಟಿಕೆಟ್‌ ಕೊಟ್ಟಿದ್ದಾರೆ. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗುವುದಾದರೆ ಆಗಲಿ. ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ಎಂಬ ವಿಚಾರ ಇಟ್ಟುಕೊಂಡು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ