ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ ಬಂದಿದ್ದು, 23ನೇ ಹಣಕಾಸು ವರ್ಷದಲ್ಲಿ 250 ಮೂಲಾಂಶದಷ್ಟು ರೆಪೊ ದರ ಹೆಚ್ಚಳವಾಗಿದೆ.
ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಹಣದುಬ್ಬರದ ವಿಚಾರದಲ್ಲಿ ನಮ್ಮ ಗುರಿ ತಲುಪಲು ದರ ಹೆಚ್ಚಿಸುವುದು ಸದ್ಯದ ಮಟ್ಟಿಗೆ ಅನಿವಾರ್ಯವಾಗಿದೆ. ಹಾಗಾಗಿ ರೆಪೊ ದರ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳವಾಗಲಿದೆ.