ಗೋಕಾಕ: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನುಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಸತೀಶ ಜಾರಕಿಹೊಳಿ ಹೇಳಿದರು.