Breaking News
Home / ರಾಜಕೀಯ / ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!

ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!

Spread the love

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ.

“ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ.

 

ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪಾವಲ್ ಹೇಳಿದ್ದಾರೆ. ಆದಾಗ್ಯೂ, ನವಜಾತ ಶಿಶುವಿನ ಲಿಂಗದ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಅದನ್ನು ಸಾರ್ವಜನಿಕಗೊಳಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಜಿಯಾ ಪಾವಲ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್ ನಲ್ಲಿ ಜಹಾದ್ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು “ನಾವು ನನ್ನ ತಾಯಿಯಾಗುವ ಕನಸು ಮತ್ತು ತಂದೆಯಾಗುವ ಅವರ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ವಯಸ್ಸಿನ ಭ್ರೂಣವು ಈಗ ಜಹಾದ್‌ನ ಹೊಟ್ಟೆಯಲ್ಲಿದೆ. ನಮಗೆ ತಿಳಿದುಬಂದ ಪ್ರಕಾರ, ಇದು ಭಾರತದಲ್ಲಿ ಮೊದಲ ಟ್ರಾನ್ಸ್ ಮ್ಯಾನ್‌ನ ಗರ್ಭಧಾರಣೆ.” ಎಂದು ಪಾವಲ್ ಪೋಸ್ಟ್‌ನಲ್ಲಿ ಹೇಳಿದ್ದರು. ಪಾವಲ್ ಮತ್ತು ಜಹಾದ್ ಕಳೆದ ಮೂರು ವರ್ಷಗಳಿಂದ ಜೊತೆಯಾಗಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ