ಬೆಂಗಳೂರು: ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಪೊಲಿಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ.
ಫೆಬ್ರವರಿ 10ರಿಂದ 24ರ ವರೆಗೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಅಧಿವೇಶನದ ಕಲಾಪಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿ ಭಂಗ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಐಪಿಸಿ ಸೆಕ್ಷನ್ 144 ರ ಅಡಿಯಲ್ಲಿ ತಡೆಯಾಜ್ಞೆ ನೀಡಿದ್ದಾರೆ.