ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.
ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಈ ವೇಳೆ ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.