Breaking News
Home / ರಾಜಕೀಯ / ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ

ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ

Spread the love

ಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ತುಷಾರ್ ಗಿರಿನಾಥ್ ಅವರು, ಈ ವಾರಾಂತ್ಯದ ವೇಳೆಗೆ ಕನಿಷ್ಟ 10 ಎಫ್‌ಐಆರ್ ದಾಖಲಿಸುವಂತೆ ಪ್ರತಿ ವಲಯದ ಸಹಾಯಕ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಈಗಾಗಲೇ ಬ್ಯಾನರ್ಗಳಿಂದ ನಗರವನ್ನು ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಫ್ಲೆಕ್ಸ್, ಬ್ಯಾನರ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಅಕ್ರಮ ಬ್ಯಾನರ್ ಮತ್ತು ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ ವಲಯವಾರು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಆಯಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Spread the love

About Laxminews 24x7

Check Also

1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

Spread the love1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ