ರಾಜ್ಯ ಸರ್ಕಾರ ತೆರೆದ ‘ನಮ್ಮ ಕ್ಲಿನಿಕ್’ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್
Laxminews 24x7
ಫೆಬ್ರವರಿ 9, 2023
ರಾಜಕೀಯ, ರಾಜ್ಯ
102 Views
ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ. ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ನಗರದಲ್ಲಿ ಬಿಜೆಪಿ ಹೊಸದಾಗಿ ಉದ್ಘಾಟಿಸಿರುವ ನಮ್ಮ ಕ್ಲಿನಿಕ್ ಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬ್ಯಾನರ್ಗಳನ್ನು ಪ್ರದರ್ಶಿಸುವ ರಾಜಕೀಯ ಪ್ರಚಾರ ಕೇಂದ್ರಗಳಲ್ಲದೆ ಬೇರೇನೂ ಅಲ್ಲ. ನಮ್ಮ ಕ್ಲಿನಿಕ್ ಗಳಲ್ಲಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ನೀಡುತ್ತಿಲ್ಲ. ರೋಗಿಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿರುವ ಪ್ರಚಾರ ಕೇಂದ್ರಗಳಾಗಿವೆ ಎಂದು ಹೇಳಿದ್ದಾರೆ. ತಮ್ಮ ತಂಡವು ಹಲವಾರು ಕ್ಲಿನಿಕ್ಗಳಿಗೆ ಭೇಟಿ ನೀಡಿ ಕೆಲಸದ ಪರಿಸ್ಥಿತಿಗಳನ್ನು ಪರಿಶೀಲಿಸಿತು.
ಈ ವೇಳೆ ನಮ್ಮ ಕ್ಲಿನಿಕ್ ಗಳಲ್ಲಿ ನಮಗೆ ಕಂಡಿದ್ದು ಬಿಜೆಪಿ ನಾಯಕರ ಬ್ಯಾನರ್ ಗಳೇ ಹೊರತು ಸುಸಜ್ಜಿತ ಕ್ಲಿನಿಕ್ ಗಳು ನಮಗೆ ಕಾಣಿಸಲಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಕರ್ನಾಟಕದ ನಮ್ಮ ಕ್ಲಿನಿಕ್ಗಳನ್ನು ದೆಹಲಿಯಲ್ಲಿ ಸ್ಥಾಪಿಸಲಾದ ಮೊಹಲ್ಲಾ ಕ್ಲಿನಿಕ್ಗಳೊಂದಿಗೆ ಹೋಲಿಸಿದ್ದಾರೆ. ದೆಹಲಿಯಲ್ಲಿ ಎಎಪಿ 500 ಮೊಹಲ್ಲಾ ಕ್ಲಿನಿಕ್ ತೆರೆದಿದೆ. ಮುಂದಿನ ದಿನಗಳಲ್ಲಿ ಇನ್ನು 500 ಕ್ಲಿನಿಕ್ ತೆರೆಯುವ ಪ್ರಯತ್ನದಲ್ಲಿದೆ.
ಆದರೆ, ಇಲ್ಲಿ ಬಿಜೆಪಿ ಸರ್ಕಾರ 438 ನಮ್ಮ ಕ್ಲಿನಿಕ್ಗಳಿಗೆ ಮಾತ್ರ ಯೋಜನೆ ರೂಪಿಸಿದೆ. ಆ ಪೈಕಿ ಬೆಂಗಳೂರಲ್ಲಿ 243, ಇನ್ನಿತರ ಕಡೆಗಳಲ್ಲಿ ಬರೀ 195 ಕ್ಲಿನಿಕ್ಗೆ ತೆರೆಯಲು ನಿರ್ಧರಿಸಿದೆ.