Breaking News
Home / ರಾಜಕೀಯ / ಪ್ರೇಮಿಗಳ ದಿನದ ಬದಲು ಮಾತೃ-ಪಿತೃ ಪೂಜನೀಯ ದಿನ ಆಚರಿಸಿ: ಹಿಂದೂ ಜನಜಾಗೃತಿ ಸಮಿತಿ

ಪ್ರೇಮಿಗಳ ದಿನದ ಬದಲು ಮಾತೃ-ಪಿತೃ ಪೂಜನೀಯ ದಿನ ಆಚರಿಸಿ: ಹಿಂದೂ ಜನಜಾಗೃತಿ ಸಮಿತಿ

Spread the love

ಮಂಗಳೂರು: ನಗರದಲ್ಲಿ ಪ್ರೇಮಿಗಳ ದಿನಾಚರಣೆಗೆ ಅವಕಾಶ ಮಾಡಿಕೊಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿಯು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.

ವ್ಯಾಲೆಂಟೈನ್ ಡೇ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಬೇಕು ಎಂದು ಮನವಿ ಮಾಡಲಾಗದು.

 

ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ಫೆಬ್ರವರಿ 14 ಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವಚ್ಛಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್‌ ದಿನ ಯುವತಿಯರನ್ನು ಪೀಡಿಸುವ ಮತ್ತು ಅವರಿಗೆ ಹಿಂಸೆ ನೀಡುವ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವ ದಿನವನ್ನಾಗಿ ಆಚರಿಸುತ್ತಿರುವುದು ಖೇದದ ಸಂಗತಿಯಾಗಿದೆ. ಈ ದಿನ ಪಾರ್ಟಿಯ ಹೆಸರಿನಲ್ಲಿ ಯುವಕ ಯುವತಿಯರು ಮದ್ಯಪಾನ, ಧೂಮಪಾನ ಮಾಡುವುದು, ಡ್ರಗ್ ಮಾಫಿಯಾದಂತಹ ಕೃತ್ಯಗಳಿಗೆ ಬಲಿಯಾಗುವುದು ಮುಂತಾದ “ಅನುಚಿತ ಘಟನೆಗಳ ಪ್ರಮಾಣ ಹೆಚ್ಚಳವಾಗುತ್ತಿದೆ.

ಅಷ್ಟೇ ಅಲ್ಲದೇ ಈ ದಿನ ಸಮಿಕ್ಷೆಯ ಪ್ರಕಾರ ಗರ್ಭನಿರೋಧಕ ಮಾರಾಟ ಅಧಿಕ ವಾಗುತ್ತಿರುವುದು, ಆನೈತಿಕತೆ ಹೆಚ್ಚಾಗುತ್ತಿರುವುದರ ದ್ಯೋತಕವಾಗಿದೆ. ಈ ದಿನ ಹುಡುಗಿಯರನ್ನು ಆಕರ್ಷಿಸಲು ವೇಗದಿಂದ ವಾಹನ ಓಡಿಸುವುದು ಮುಂತಾದ ದುರ್ಘಟನೆಗಳ ಪ್ರಮಾಣವು ಹೆಚ್ಚಾಗುತ್ತಿದೆ. ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯು ಪ್ರೇಮಿಗಳ ದಿನದ ವಿರುದ್ಧ ಜನಜಾಗೃತಿ ಅಭಿಯಾನ ಮಾಡುವುದು, ಅದನ್ನು ತಡೆಯಲು ಅದಕ್ಕೆ ಪರ್ಯಾಯವಾಗಿ ಫೆಬ್ರುವರಿ 14 ರಂದು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಆಯೋಜನೆ ಮಾಡತ್ತೇವೆ ಎಂದು ಹೇಳಿಕೊಂಡಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ