Breaking News

ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ: ಹೆಚ್ ಡಿಕೆ ಪುನರುಚ್ಚಾರ

Spread the love

ಬೆಳಗಾವಿ: ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯವಾಗಿ ಭವಾನಿ ರೇವಣ್ಣ ಅವರು ಈ ಚುನಾವಣೆಯಲ್ಲಿ ಅನಿವಾರ್ಯ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಹಾಸನ ಟಿಕೆಟ್ ವಿಚಾರ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ. ಚುನಾವಣೆ ಗೆಲ್ಲಬೇಕಾದ ಹಿನ್ನಲೆಯಲ್ಲಿ ನಾವು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ನಮಗೆ 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಈ ಕೊರತೆ ತುಂಬಿಕೊಳ್ಳಲು ಜನರ ವಿಶ್ವಾಸ ಪಡೆದುಕೊಳ್ಳುವ ಹೊಸ ಮುಖಗಳಿದ್ದರೂ ಸರಿ ಅವರಿಗೆ ನಾವು ಬೆಂಬಲ ಕೊಡುತ್ತೇವೆ ಎಂದರು.

ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ, ಇಂತಹ ಸಿ ಡಿ ತಯಾರಿಕೆ ಅದರ ಕಾರ್ಖಾನೆಯ ಬಗ್ಗೆ ಮಾತನಾಡುವಷ್ಟು ಸಮಯ ನನಗೆ ಇಲ್ಲ. ಮೇಲಾಗಿ ಸಿಡಿ ಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಇದನ್ನು ಇಟ್ಟುಕೊಂಡು ಚುನಾವಣೆ ಎದುರಿಸಲು ಸಾಧ್ಯವೇ?. ಜನರ ಮುಂದೆ ಇದನ್ನು ಪ್ರಸ್ತಾಪ ಮಾಡಿ ಮತಗಳಿಸಲು ಆಗುತ್ತದೆಯೇ?. ಹೀಗಿರುವಾಗ ಅದನ್ನು ಬಿಟ್ಟು ಜನರ ಸಮಸ್ಯೆಗಳ ಕಡೆ ಗಮನಹರಿಸಿದರೆ ಒಳ್ಳೆಯದು ಎಂದರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ