Breaking News

ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆರಮೇಶ್ ಜಾರಕಿಹೊಳಿ‌ ಅವರಿಗೆ ಮನವಿ

Spread the love

ಬೆಂಗಳೂರು:  ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಮನವಿ ಮಾಡಿದರು.

ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ ಕಾಲ ರಾಜಾರಾವ್ ಅವರು ಸಲ್ಲಿಸಿರುವ ಸೇವೆ ನಮಗೆಲ್ಲ ಮಾದರಿ. ಹಾಗಾಗಿ ಈ ಕೂಡಲೇ ಮುಖ್ಯಮಂತ್ರಿಗಳಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಈ ಕುರಿತು ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗಮನಿಸಿ ಕ್ಯಾಪ್ಟನ್ ಎಸ್. ರಾಜಾರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಶಿಫಾರಸ್ಸು ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ