Breaking News

ಮದುವೆಗೆ ಮುನ್ನವೇ ಕಿಯಾರಾ ಅಡ್ವಾಣಿ ಗರ್ಭಿಣಿ.!?

Spread the love

ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತ್ತೀಚೆಗೆ ಜೈಸಲ್ಮೇರ್‌ನ ಅರಮನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾದ ಕೆಲವೇ ದಿನಗಳಲ್ಲಿ, ಕಿಯಾರಾ ಅಡ್ವಾಣಿ ಗರ್ಭಧಾರಣೆಯ ವದಂತಿಗಳು ಹರಡಲು ಪ್ರಾರಂಭಿಸಿವೆ.

ವಾಸ್ತವವಾಗಿ, ಮದುವೆಯ ನಂತರ ಜೈಸಲ್ಮೇರ್‌ನಿಂದ ದೆಹಲಿಗೆ ಹಿಂದಿರುಗುವಾಗ, ಕಿಯಾರಾ ಅಡ್ವಾಣಿ ಕಪ್ಪು ಬಟ್ಟೆಯನ್ನು ಧರಿಸಿದ್ದರು. ಇದರೊಂದಿಗೆ, ನಟಿ ಬೂದು-ಕಪ್ಪು ಬಣ್ಣದ ಶಾಲು ಧರಿಸಿದ್ದರು. ಕಿಯಾರಾ ಅಡ್ವಾಣಿ ಫೋಟೋಗಳಿಗೆ ಪೋಸ್‌ ನೀಡುವಾಗ ಶಾಲು ಹೊದ್ದುಕೊಂಡು ಮತ್ತೆ ಮತ್ತೆ ಅಡ್ಜಸ್ಟ್ ಮಾಡಿಕೊಂಡು ಹೊಟ್ಟೆ ಮುಚ್ಚಿಕೊಳ್ಳುತ್ತಿದ್ದ ಸ್ಟೈಲ್ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಇದೇ ಕಾರಣಕ್ಕೆ ನಟಿಯ ಗರ್ಭಧಾರಣೆಯ ಬಗ್ಗೆ ನೆಟ್ಟಿಗರು ಊಹಾಪೋಹ ಶುರು ಮಾಡಿದ್ದಾರೆ.

ಕಿಯಾರಾ ಅಡ್ವಾಣಿ ಅವರ‌ ಈ ವಿಮಾನ ನಿಲ್ದಾಣದ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ನಿರಂತರವಾಗಿ ಟ್ರೋಲ್ ಆಗುತ್ತಿದೆ. ಮೊದಲು ಕಪ್ಪು ಬಟ್ಟೆ ಧರಿಸಿ, ಈಗ ಶಾಲು ಹೊದ್ದು ಹೊಟ್ಟೆ ಮುಚ್ಚುವ ಶೈಲಿ ಪ್ರಗ್ನೆನ್ಸಿ ಊಹಾಪೋಹಗಳಿಗೆ ಕಾರಣವಾಗಿವೆ. “ಈ ಮೇಡಮ್ 3-4 ತಿಂಗಳಲ್ಲಿ ಒಳ್ಳೆಯ ಸುದ್ದಿ ನೀಡಲಿದ್ದಾರೆ, ಅವರ ಗರ್ಭಧಾರಣೆಯ ಸುದ್ದಿಯೂ ಬರಲಿದೆ. ದುಪಟ್ಟಾದಿಂದ ಹೊಟ್ಟೆ ಮರೆಮಾಚಿಕೊಂಡಿದ್ದಾರೆ” ಎಂದಿ ಒಬ್ಬ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ. ಕಿಯಾರಾ ಗರ್ಭಧಾರಣೆಯ ಬಗ್ಗೆ ಏನೇ ಚರ್ಚೆಗಳು ನಡೆಯುತ್ತಿದ್ದರೂ ಅದು ಕೇವಲ ವದಂತಿ ಮಾತ್ರ.

ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು ಫೆಬ್ರವರಿ 7 ರಂದು ಜೈಸಲ್ಮೇರ್‌ನ ಸೂರ್ಯಗಢ ಅರಮನೆಯಲ್ಲಿ ನಡೆಯಿತು. ಈಗ ದೆಹಲಿಯಲ್ಲಿ ಆರತಕ್ಷತೆ ನಡೆಯಲಿದೆ. ದಂಪತಿಗಳು ಫೆಬ್ರವರಿ 12 ರಂದು ಮುಂಬೈನ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ರಿಸೆಪ್ಶನ್‌ ಆಯೋಜಿಸಿದ್ದಾರೆ. ವರದಿಗಳ ಪ್ರಕಾರ, ಸಿದ್ಧಾರ್ಥ್ ಮತ್ತು ಕಿಯಾರಾ ಅವರ ಆರತಕ್ಷತೆಯಲ್ಲಿ ಶಾರುಖ್ ಖಾನ್, ಅಜಯ್ ದೇವಗನ್ ಸೇರಿ ಸೌತ್ ಸೂಪರ್‌ಸ್ಟಾರ್ ರಾಮ್ ಚರಣ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ